ಲೋಕಸಭಾ ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳಾದ ಪ್ರಿಸೈಡಿಂಗ್ ಆಫೀಸರ್ ಹಾಗೂ ಅಸಿಸ್ಟಂಟ್ ಪ್ರಿಸ್ಟೆಂಡಿಗ್ ಆಫೀಸರ್ ಗಳಿಗೆ ಇಂದು 2ನೇ ತರಬೇತಿ ನಡೆಯುತ್ತಿರುವ 3 ಸ್ಥಳಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮತದಾನದ ದಿನ ಮತಗಟ್ಟೆಗಳ ಬಳಿ ನಡೆಯುವ ಎಲ್ಲಾ ಚಟುವಟಿಕೆಗಳ ಕುರಿತು ಮಾಸ್ಟರ್ ಟ್ರೈನರ್ ಗಳು ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಸರಿಯಾಗಿ ಅರಿತುಕೊಳ್ಳಬೇಕೆಂದು ತಿಳಿಸಿದರು