ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಿಇಟಿ ಪರೀಕ್ಷೆ ರಾಜ್ಯದಾದ್ಯಂತ ಇಂದು ಮತ್ತು ನಾಳೆ ನಡೆಯಲಿದೆ.
ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3, 49, 637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.