ಭಾರತ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ಮೂಡಬಿದ್ರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಪೊಲೀಸ್ ನಿರೀಕ್ಷಕ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು ಪ್ರಾಂಶುಪಾಲರಾದ ಪ್ರಶಾಂತ್ ಸಿ. ಎಂ. ಹಸಿರು ನಿಶಾನೆ ಹಾರಿಸುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿದರು.





