ಕಲಬುರಗಿ ನಗರದ ಐನಾಕ್ಸ್ ಚಿತ್ರಮಂದಿರದಲ್ಲಿ ಇಂದು ಪ್ರಸಕ್ತ ಲೋಕಸಭಾ ಚುಣಾವಣೆಯಲ್ಲಿ ಮತದಾರರ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮೀತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಚುಣಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದ ಬಿ.ಪೌಜಿಯಾ ತರನ್ನುಮ್, ಜಿಲ್ಲಾ ಸ್ವೀಪ್ ಸಮೀತಿ ಅದ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಓ ಆದ ಭಂವಾರ್ ಸಿಂಗ್ ಮೀನಾ ಸೇರಿದಂತೆ ಹಲವರೂ ಇದ್ದರು.





