Google search engine
ಮನೆUncategorizedನಮ್ಮ ನಡೆ ಮತಗಟ್ಟೆ ಕಡೆ ಜಾತ ಕಾರ್ಯಕ್ರಮ

ನಮ್ಮ ನಡೆ ಮತಗಟ್ಟೆ ಕಡೆ ಜಾತ ಕಾರ್ಯಕ್ರಮ

ಸಾರ್ವತ್ರಿಕ ಲೋಕಸಭಾ ಹಾಗೂ ಶೋರಾಪುರ ವಿಧಾನಸಭೆ ಉಪಚುನಾವಣೆ ಹಿನ್ನಲೆ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಸುಶೀಲ ಬಿ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚುನಾವಣೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಜನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ? ಇಲ್ಲವೇ ಎಂದು ಪರಿಶಿಲೀಸಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಕಲ್ಪಿಸಲಾದ ಮೂಲಭೂತ ಸೌಕರ್ಯಗಳ ಬಗ್ಗೆ ಅರಿತುಕೊಂಡು ಖಚಿತಪಡಿಸಿಕೊಳ್ಳಿ ಮೇ 07 ರಂದು ಮತಗಟ್ಡೆಗೆ ತೆರಳಿ ತಪ್ಪದೇ ಮತದಾನ ಮಾಡಿ, ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು. ತಾವು ಮತದಾನ ಚಲಾಯಿಸುವುದರ ಜೊತೆಗೆ ನೆರೆಹೊರೆಯ ಇತರರಿಗೂ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಗರಿಮಾ ಪನ್ವಾರ, ಜಿಲ್ಲಾ ಪಂಚಾಯತ ಸಿಪಿಓ ಗುರುನಾಥ ಗೌಡಪ್ಪನ್ನೋರ್, ಚುನಾವಣೆ ತಹಶಿಲ್ದಾರ ಸಂತೋಷರಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಉತ್ತರಾದೇವಿ ಮಠಪತಿ, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ಅಂಬೇಡ್ಕರ್ ನಿಗಮದ ವ್ಯವಸ್ಥಾಪಕಿ ಕು.ದೀಪ, ಡಿಹೆಚ್ಓ ಡಾ.ಪ್ರಭುಲಿಂಗ ಮಾನಕರ್, ಜಿಲ್ಲಾ ಅಂಗವಿಕಲ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕು. ಸರೋಜ, ಶರಣಗೌಡ ಪಾಟೀಲ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಆಯಷ್ ಇಲಾಖೆ ಅಧಿಕಾರಿ ಡಾ.ವಂದನಾ ಗಾಳಿ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಭೀಮಣ್ಣ ವೈದ್ಯ, ಜಿಲ್ಲಾ ಪಂಚಾಯತ ಎನ್ಆರ್ಡಿಎಮ್ಎಸ್ ಪ್ರಾಜೆಕ್ಟ್ ಆಫೀಸರ್ ಸಿದ್ದಾರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!