ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕ ಸ್ವೀಪ್ ಸಮಿತಿ ಹಾಗೂ ನಗರಸಭೆ ಶಹಾಪುರ ಸಹಯೋಗದಲ್ಲಿ ಏ.29ರಂದು ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ತಾಲೂಕ ಮಟ್ಟದ ಮತದಾನ ಜಾಗೃತಿ (ಸ್ವೀಪ್) ಕಾರ್ಯಕ್ರಮ ನಡೆಯಿತು.
ಇದಕ್ಕೂ ಮುನ್ನ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಸಿಪಿಎಸ್ ಶಾಲಾ ಮೈದಾನದ ವರೆಗೆ ವಿಶೇಷಚೇತನರ ತ್ರಿಚಕ್ರವಾಹನ (ಬೈಕ್ ರ್ಯಾಲಿ), ನಗರದ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರ ಕಾಲ್ನಡಿಗೆ ಜಾಥಾ ಎತ್ತಿನ ಬಂಡಿಯಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ನಗರಸಭೆ ಆಯುಕ್ತರನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು.
ಬಳಿಕ, ಮತದಾನ ಕೇಂದ್ರಗಳತ್ತ ಮತದಾರರ ಮನಸ್ಸನ್ನು ಸೆಳೆಯಲು ಲಿಂಬೆ ಚಮಚಾ ನಡಿಗೆ, ಗೋಣಿ ಚೀಲ ಓಟ ಕ್ರೀಡಾ ಚಟುವಟಿಕೆ ಹಮ್ಮಿಕೊಂಡು ಪ್ರಥಮ, ದ್ವೀತಿಯ ಸ್ಥಾನದಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ, ಗೌರವಿಸಲಾಯಿತು.