ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೈ ನಾಯಕರು ಮತಬೇಟೆ ಮಾಡಿದರು. ಯಾದಗಿರಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕೈ ನಾಯಕರು ಭರ್ಜರಿ ಕ್ಯಾಂಪೇನ್ ಮಾಡಿದರು. ಈ ವೇಳೆ ಕಾವೇರಿಯ ಬಿಜೆಪಿ ಮಾಜಿ ಶಾಸಕ ಕಮಲ ತೊರೆದು ಕೈ ಹೀಡಿದರು.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಯಾದಗಿರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಎಲ್ಲಾ ಸಮುದಾಯದವರನ್ನು ದೇವಾಲಯಗಲ್ಲಿ ತೆರಳಲು ಅವಕಾಶ ಮಾಡಿಕೊಟ್ಟ ನಂತರ ಆ ಮೇಲೆ ನನ್ನನ್ನು ಕರೆಯಿರಿ ದೇವಸ್ಥಾನಕ್ಕೆ ಬರುತ್ತೆನೆಂದರು.ನಂತರ ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿಕೆಶಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮಾತನಾಡಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.





