ಪೆನ್‌ಡ್ರೈವ್ ಪ್ರಕರಣ ದೇಶದಾದ್ಯಂತ ಸುದ್ದಿ ಮಾಡುತ್ತಿತ್ತು. ಈ ಬೆನ್ನಲ್ಲೇ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಅಪಹರಣ ಮಾಡಲಾಗುತ್ತದೆ. ಈ ಪ್ರಕರಣ ಸಂಬಂಧ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತದೆ. ಈ ಬೆನ್ನಲ್ಲೇ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಆಗಮಿಸಿದ್ದರು. ದೇವೇಗೌಡರ ಮನೆಯಿಂದ ರೇವಣ್ಣ ಮನೆಯಿಂದ ಹೊರಬರುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಅರೆಸ್ಟ್ ಮಾಡುತ್ತಾರೆ





