ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ , ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅವರು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಮತಯಾಚನೆ ಪರ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೇ 28ರಂದು ಕಲಬುರಗಿ ನಗರಕ್ಕೆ ಬರುವರು’ ಎಂದು ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ‘ಈಶಾನ್ಯ ಪದವೀಧರ ಕ್ಷೇತ್ರದ 1.56 ಲಕ್ಷ ಮತದಾರರನ್ನು ತಲುಪಲು 41 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾಲಕರು, ಸಹ ಸಂಚಾಲಕರನ್ನು ನೇಮಿಸಲಾಗಿದೆ. 195 ಬೂತ್‌ಗಳಿಗೆ ಘಟ ನಾಯಕರ ತಂಡ ರಚಿಸಿ, ಪ್ರತಿ ಮತದಾರರನ್ನು ಭೇಟಿಯಾಗುವರು ಎಂದರು.





