ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12878 ಕಿ. ಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1344. 84 ಕಿ. ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗುತ್ತದೆ ಎಂದರು





