ತಮ್ಮ ಗೆಲುವಿಗೆ ಬಿಜೆಪಿ ಎಷ್ಟು ಕಾರಣವೋ ಜೆಡಿಎಸ್ ಕೂಡ ಅಷ್ಟೇ ಕಾರಣ ಎಂದು ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ವಿ ಸೋಮಣ್ಣ ಹೇಳಿದರು. ನಗರದಲ್ಲಿಂದು ಹೆಚ್ ಡಿ ಕುಮಾರಸ್ವಾಮಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಣ್ಣ ತಾವು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿಯವರೇ ಕಾರಣ, ಅವರೆಲ್ಲರಿಗೆ ತಾನು ಋಣಿಯಾಗಿರುವುದಾಗಿ ಸೋಮಣ್ಣ ಹೇಳಿದರು.





