ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೀರಾತುಗಳನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಈ ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.





