ಮಾನನಷ್ಟ ಪ್ರಕರಣದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಜರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಇರುವ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಭಾರಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ರಾಹುಲ್ ಗಾಂಧಿಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವ ಸಾಧ್ಯತೆಗಳಿರುವ ಕಾರಣದಿಂದಾಗಿ, ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು





