ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಟಿ, ಸಿ ಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ ಯಾವುದೇ ಅಪಾಯ ಸಂಭವಿಸಿಲ್ಲ ಮುಂಜಾಗೃತ ಕ್ರಮವಾಗಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನಂತರದಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಗ್ರಾಮಸ್ಥರು ಹೆಸ್ಕಾಂ ಇಲಾಖೆಗೆ ಮಾಹಿತಿ ನೀಡಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.





