Google search engine
ಮನೆUncategorizedವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ವಿಜಯಪುರದ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಆಯೋಜಿಸಲಾಗಿತ್ತು

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ವಿಜಯಪುರದ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಆಯೋಜಿಸಲಾಗಿತ್ತು

ವಿಜಯಪುರದ ಶ್ರೀ ಸಿದ್ಧೇಶ್ವರ ಕಾನೂನು ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಭಾಗಿತ್ವದಲ್ಲಿ ಇಂದು

“ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ವಿಜಯಪುರದ ಸರಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಸರಸ್ವತಿ  ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿಸುವ ಮೂಲಕ ಚಾಲನೆ ನೀಡಲಾಯಿತು.

“ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ನಾವೆಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸೋಣ”

ಮಕ್ಕಳನ್ನು ಶಾಲೆಗೆ ಕಳುಹಿಸಿ, ಕೆಲಸಕ್ಕಲ್ಲ. ಹಾಗೂ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು ಮಕ್ಕಳಿಗೆ ಇರುವ ಕಾನೂನಿನ ಅರಿವು ನೆರವು ಕುರಿತು ಪ್ರೊಫೆಸರ್ ಸನಾತನ ದೇಶಪಾಂಡೆ ಅವರು ಮಕ್ಕಳಿಗೆ ಮನ ತಟ್ಟುವಂತೆ ತಿಳಿಸಿದರು.

ಕಾನೂನು ವಿದ್ಯಾರ್ಥಿಗಳಿಂದ ಜೀತ ಪದ್ಧತಿ ಹಾಗೂ ಬಾಲ ಕಾರ್ಮಿಕರ ಬಗ್ಗೆ ಕಿರು ನಾಟಕ ಪ್ರದರ್ಶನ ಮಾಡುವ ಮೂಲಕ ಮಕ್ಕಳ ಗಮನ ಸೆಳೆದರು…

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ

ಶ್ರೀ ಸಿದ್ದೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಸುಷ್ಮಾ ದೇಸಾಯಿ, ಸರಕಾರಿ ಗಂಡು ಮಕ್ಕಳ  ಶಾಲೆಯ ಮುಖ್ಯಗುರುಗಳಾದ ಶ್ರೀ ಬಿ ಸಿ ಛಲವಾದಿ, ಪ್ರೊಫೆಸರ್ ಸನಾತನ ದೇಶಪಾಂಡೆ, ಕಾನೂನು ವಿದ್ಯಾರ್ಥಿಗಳು, ಹಾಗೂ ಶಾಲಾ ಮಕ್ಕಳು ಸೇರಿದಂತೆ ಹಲವರು ಉಪಸ್ಥಿತರಿದ್ದರು…

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!