ರಾಜ್ಯವಿಧಾನ ಪರಿಷತ್ತಿಗೆ ನಾಮಕರಣಗೊಂಡಿರುವ ಜಗದೇವ ಗುತ್ತೇದಾರ್ ಅವರಿಗೆ ಇದೇ ಜೂ.15 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸತತ ಏಳು ವರ್ಷ ಸೇವೆ ಸಲ್ಲಿಸಿದ ಜಗದೇವ್ ಅವರ ಪ್ರಾಮಾಣಿಕ ಸೇವೆ ಗುರುತಿಸಿ ಪಕ್ಷದ ವರಿಷ್ಠರು ಅವರನ್ನು ರಾಜ್ಯ ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದಾರೆ. ಇದರಿಂದ ಪಕ್ಷದಲ್ಲಿ ಹಲವು ವರ್ಷಗಳಿಂದ ತಳಮಟ್ಟದ ಕಾರ್ಯಕರ್ತರಿಗೆ ನೈತಿಕ ಬಲ ದೊರೆತಂತಾಗಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.





