Home Uncategorized ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ ನಾಗಲಕ್ಷ್ಮೀ ಚೌಧರಿ ವಿದ್ಯಾರ್ಥಿನಿಯರೊಂದಿಗೆ ಸಂವಾದ

ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ ನಾಗಲಕ್ಷ್ಮೀ ಚೌಧರಿ ವಿದ್ಯಾರ್ಥಿನಿಯರೊಂದಿಗೆ ಸಂವಾದ

0
ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ ನಾಗಲಕ್ಷ್ಮೀ ಚೌಧರಿ ವಿದ್ಯಾರ್ಥಿನಿಯರೊಂದಿಗೆ ಸಂವಾದ

ಕಲಬುರಗಿ ಪ್ರವಾಸದಲ್ಲಿರುವ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ನಗರದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.

ಸರಕಾರಿ ಮಹಾವಿದ್ಯಾಲಯ ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರುಗಳು ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರಿಗೆ ಶಿಕ್ಷಣ, ಉದ್ಯೋಗ ಹಾಗೂ ವಿವಿಧ ಕ್ಷೇತ್ರದಲ್ಲಿ ಮಹಿಳೆಯರ ಸೇವೆ ಸಾಧನೆ ಹಾಗೂ ರಕ್ಷಣೆಯ ಕುರಿತು ಸಂವಾದ ನಡೆಸಿದರು.

ಸವಾಂದ ಕಾರ್ಯಕ್ರಮದಲ್ಲಿ ಕೆ.ಕೆ‌.ಆರ್.ಟಿ.ಸಿ. ಜಿಲ್ಲಾಧಿಕಾರಿ ನಾರಾಯಣಪ್ಪ ಕುರಬಾರ, ಸರಕಾರಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ, ಕಲಾ ವಿಭಾಗದ ಡೀನರಾದ ವಿಜಯ್ ಕುಮಾರ, ವಾಣಿಜ್ಯ ವಿಭಾಗ ಡೀನರಾದ ಡಾ.ರಾಜಕುಮಾರ, ಡಾ.ರೇಖಾ ಅಣ್ಣಿಗೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

error: Content is protected !!