ಕರ್ನಾಟಕ ರಾಜ್ಯ ಉದಯವಾಗಿ 50ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ನಾಗರಿಕರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಅವರು ಕರೆ ನೀಡಿದರು.
ಗುಡಿಬಂಡೆ ತಾಲೂಕಿನಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೆಸಂದ್ರ ಪಂಚಾಯಿತಿಯ ಆರೂರು ಗ್ರಾಮಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಇಂದು ಸ್ವಾಗತಿಸಿದ ನಂತರ ಮುಖ್ಯ ರಸ್ತೆಗಳಲ್ಲಿ ಸಂಚರಿಸಲು ರಥಕ್ಕೆ ಚಾಲನೆ ನೀಡಿದರು





