Home Uncategorized ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜದ ಅಧ್ಯಕ್ಷ ಶಿವಶರಣಪ್ಪಾ ಕುಂಬಾರ ಒತ್ತಾಯಿಸಿದ್ದಾರೆ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜದ ಅಧ್ಯಕ್ಷ ಶಿವಶರಣಪ್ಪಾ ಕುಂಬಾರ ಒತ್ತಾಯಿಸಿದ್ದಾರೆ

0

 

ಕರ್ನಾಟಕ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜದ ಅಧ್ಯಕ್ಷ ಶಿವಶರಣಪ್ಪಾ ಕುಂಬಾರ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಮಾರ್ಚ್ 2023 ರಲ್ಲಿಯೇ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಆದರೆ ಇಲ್ಲಿಯವರೆಗೂ ನಿಗಮದ ಅಧ್ಯಕ್ಷರನ್ನಾಗಲಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವುದಾಗಲಿ ಇಲ್ಲಿಯವರೆಗೂ ಆಗಿಲ್ಲ. ಕರ್ನಾಟಕದಲ್ಲಿ ಕುಂಬಾರರು ಹಿಂದುಳಿದ ಸಮುದಾಯಕ್ಕೆ ಸೇರಿದವರೆಂದು ಮಾತ್ರ ಹಣೆಪಟ್ಟಿ ಇದೆ. ಆದರೆ ಸರ್ಕಾರದವರು ಹಿಂದುಳಿದ ವರ್ಗದವರಿಗೆ ನೀಡುವ ಸೌಲಭ್ಯಗಳಿಂದ ನಾವು ವಂಚಿತರಾಗುತ್ತಿದ್ದೇವೆ. ಹೀಗಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದು ಸರ್ಕಾರ ಆದಷ್ಟು ಬೇಗ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ ಸೂಕ್ತ ಅನುದಾನ ಮಂಜೂರು ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು

 

LEAVE A REPLY

Please enter your comment!
Please enter your name here

error: Content is protected !!