ಗುಲಬರ್ಗಾ ವಿಶ್ವ ವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿ ನಡೆದ 42ನೇ ಘಟಿಕೋತ್ಸವದಲ್ಲಿ ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆದು 2047ಕ್ಕೆ ಶತಮಾನೋತ್ಸವ ಆಚರಿಸಲಿದ್ದು, ಈ ಹೊತ್ತಿಗೆ ದೇಶ ಸಾಕ್ಷರತೆ ಪ್ರಮಾಣವನ್ನು ಶೇಕಡಾ 100ಕ್ಕೆ ಹೆಚ್ಚಿಸಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದ್ದಾರೆ.
ಕಲಬುರಗಿ ನಗರದಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಜರುಗಿದ ವಿ.ವಿ.ಯ 42ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಘಟಿಕೋತ್ಸವದಲ್ಲಿ ವಿವಿಧ ವಿಭಾಗದಲ್ಲಿ ಹೆಚ್ಚಿನ ಅಂಕ ಗಳಿಸಿದ 74 ಅಭ್ಯರ್ಥಿಗಳಿಗೆ 168 ಚಿನ್ನದ ಪದಕ ಪ್ರದಾನ, 9 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ಪರಿವರ್ತಿಸಿ ಹಾಗೂ 14 ವಿದ್ಯಾರ್ಥಿಗಳಿಗೆ ವಿತರಿಸಿ. ಹಾಗೂ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವಿದ್ಯಾರ್ಥಿನಿ ಆನಂದಮ್ಮ ಅವರು 13 ಚಿನ್ನದ ಪದಕ ಪಡೆದು ಘಟಿಕೋತ್ಸವದಲ್ಲಿ ಹೆಚ್ಚಿನ ಪದಕ ಪಡೆದ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದ ಅವರನ್ನು ಹಾಗೂ 113 ಅಭ್ಯರ್ಥಿಗಳಿಗೆ ಪಿಹೆಚ್ ಡಿ ಪದವಿ ಪ್ರಧಾನ ಮಾಡಿ ಮಾತನಾಡಿದ ಅವರು ಪ್ರಸ್ತುತ ದೇಶದಲ್ಲಿ ಪುರುಷರು ಶೇ. 75ರಷ್ಟು ಸಾಕ್ಷರತೆ ಹೊಂದಿದ್ದರೆ, ಮಹಿಳೆಯರಲ್ಲಿ ಇದರ ಪ್ರಮಾಣ ಇನ್ನು ಕಡಿಮೆ ಇದೆ. ಶಿಕ್ಷಣದಿಂದ ಮಾತ್ರ ಯಶಸ್ಸು ಸಾಧ್ಯವಿದ್ದು, ಹೀಗಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ನಳಂದಾ, ತಕ್ಷಶಿಲಾದಂತಹ ಉನ್ನತ ಶಿಕ್ಷಣ ಸಂಸ್ಥೆಗಳ ಇತಿಹಾಸ ನಾವು ಹೊಂದಿದ್ದೇವೆ. ಹಿಂದೆ ದೇಶವನ್ನು ಸೋನೆ ಕೀ ಚಿಡಿಯಾ ಎಂದು ಕರೆಯಲಾಗಿತ್ತು. ಇದೀಗ ಮತ್ತೆ ಭಾರತವನ್ನು ವಿಶ್ವಗುರು ಮಾಡಬೇಕಿದೆ. ಸಮಾನತೆ, ನ್ಯಾಯಕ್ಕಾಗಿ ಗುಲಬರ್ಗಾ ವಿ.ವಿ. ಶ್ರಮಿಸುತ್ತಿದೆ. ವಸುದೈವ ಕುಟುಂಬಕ್ಕಂ ಪರಿಕಲ್ಪನೆ ನಮ್ಮದಾಗಿದ್ದು, ಸರ್ವಜನರು ಸುಖದಿಂದ ಬಾಳುವಂತೆ ಮತ್ತು ಜನರು ನಿರೋಗಿಯಾಗಿ ಬದುಕುವ ನಮ್ಮ ಚಿಂತನೆ ಎಲ್ಲೆಡೆ ಪಸರಿಸಬೇಕಿದೆ ಎಂದರು.