ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಡಿ. ದೇವರಾಜ ಅರಸುರವರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ ಎಂದು ಕುಮಾರ ಯಾದವ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಇದೇ ತಿಂಗಳ 20 ರಂದು ನಗರದಲ್ಲಿನ ಎಸ್ ಎಮ್ ಪಂಡಿತ ರಂಗ ಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸರ್ದಾರ ವಲ್ಲಭಬಾಯಿ ಪಟೇಲ ವೃತ್ತದಿಂದ ರಂಗ ಮಂದಿರದ ವರೆಗೆ ಡಿ. ದೇವರಾಜ ಅರಸುರವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ, ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಲಂಬಾಣಿ ನೃತ್ಯ, ಹಲಿಗೆ, ಗೊಂದಳಿ ಭಜನೆ, ಕಟಬು ಪರಿಕರಗಳ ಪ್ರದರ್ಶನ, ದುರ್ಗಿ- ಮುರ್ಗಿ ನೃತ್ಯ ಸೇರಿದಂತೆ ವಿವಿಧ ಕಲಾ ತಂಡಗಳಿಂದ ಮೆರವಣಿಗೆಯು ನಡೆಯಲಿದ್ದೂ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಮನವಿ ಮಾಡಿಕೊಂಡರು. ಇನ್ನೂ ಈ ಕಾರ್ಯಕ್ರಮದಲ್ಲಿ ಉಸ್ತುವಾರಿ ಮಂತ್ರಿಗಳಾದ ಪ್ರಿಯಾಂಕ್ ಖರ್ಗೆ, ಸಚಿವ ಶರಣಪ್ರಕಾಶ ಪಾಟೀಲ್, ಶಾಸಕ ಅಲ್ಲಮಪ್ರಭು ಪಾಟೀಲ್ , ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್ ಪಾಟೀಲ್, ಕೆಕೆಆರ್’ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ





