. ರಾಜ್ಯಪಾಲರ ಬೆನ್ನಿಗೆ ಕೇಸರಿ ಪಡೆಯು ನಿಂತಿದ್ದೂ, ಕಲಬುರಗಿಯಲ್ಲೂ ಸಿದ್ದರಾಮಯ್ಯನವರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿ ಸಿಎಂ ರಾಜಿನಾಮೆಗಾಗಿ ಒತ್ತಾಯಿಸಿದೆ
ನಗರದ ಎಸ್’ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮೈಸೂರು ನಗರಾಭಿವೃಧ್ದಿ ಪ್ರಾಧಿಕಾರದಲ್ಲಿ ಹಗರಣ ನಡೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಸಿಎಂಗೆ ಪ್ರಾಸಿಕ್ಯೂಷನ್’ಗೆ ಅನುಮತಿ ಕೊಟ್ಟಿದ್ದೂ, ಇದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರಿಗೆ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಅದ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಶಾಸಕ ಬಸವರಾಜ ಮತ್ತಿಮೂಡ, ಶಶೀಲ ಜಿ ನಮೋಶಿ, ಶಾಸಕ ಅವಿನಾಶ ಜಾಧವ, ಮಾಜಿ ಶಾಸಕ ದತ್ತಾತ್ರೆಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ ಸೇರಿದಂತೆ ಇನ್ನಿತರರು ಇದ್ದರು





