ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆಶಿ ಹೇಳಿದರು. ರಾಜಧಾನಿಯ 1, 40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸೌಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್‌ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ ಎಂದಿದ್ದಾರೆ.