ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದೆ, ಕಿರುಕುಳ ಆಗುತ್ತಿದೆ ಎಂದು ಡಿಸಿಎಂ ಡಿಕೆಶಿ ಹೇಳಿದರು. ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ಮಾಡಿದರು ಎಂದಿದ್ದಾರೆ