ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಕೆಲಸ ನಡೆಯುತ್ತಿದ್ದೂ, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಜೆಡಿಎಸ್ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಡಿ ಜಿ ಸಾಗರ ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯನವರನ್ನು ಒಂದೇ ಒಂದು ಹುನ್ನಾರವನ್ನಿಟ್ಟುಕೊಂಡು ಬಿಜೆಪಿ ಜೆಡಿಎಸ್ ಸರ್ಕಾರಗಳು ಅಸ್ಥಿರಗೊಳಿಸುವಂತಹ ಕೆಲಸ ಮಾಡುತ್ತಿದ್ದು, ಶಶಿಕಾಲೆ ಜೊಲ್ಲೆ, ಕುಮಾರಸ್ವಾಮಿ ಸೇರಿದಂತೆ ಹಲವರ ಮೇಲೆ ಬೇರೆ ಬೇರೆ ಆರೋಪಗಳಿದ್ದರು ಅವರನ್ನು ತನಿಖೆಗೆ ಆದೇಶ ನೀಡದೇ ಸಿಎಂ ಸಿದ್ದರಾಮಯ್ಯನವರ ಮುಡಾ ಎಂಬ ಹಗರಣವನ್ನು ಮುಂದಿಟ್ಟುಕೊಂಡು ಅವರನ್ನು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದು ಖಂಡನೀಯ, ಅದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಬಲಿಸಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇದೇ 29 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಪ್ರಮುಖರಾದ ಸುರೇಶ ಹಾದಿಮನಿ, ಉಮೇಶ ನರೋಣಾ, ಬಿ.ಸಿ ವಾಲಿ, ಕೃಷ್ಣಪ್ಪ ಕಣಿಕರ್ ಸೇರಿದಂತೆ ಇತರರು ಇದ್ದರು





