ನಗರದ ನ್ಯಾಯಾಲಯದ ಆವರಣದಲ್ಲಿ ಬಾಲ ಕಾರ್ಮಿಕ ಮಕ್ಕಳ ರಕ್ಷಣೆ ಮತ್ತು ಪುನರ್ ವಸತಿ ಹಾಗೂ ತಾಯಿ ಹೆಸರಿನಲ್ಲಿ ಒಂದು ಗಿಡ ಅಭಿಯಾನದ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಜರುಗಿತು.
ಈ ವೇಳೆ ವಿಶೇಷ ಉಪನ್ಯಾಸ ನೀಡಿದ ನ್ಯಾ. ಭಾಸ್ಕರರಾವ್ ಮುಡಬೂಳ, ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಅನೇಕ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಕೂಲಿ ಕೆಲಸಕ್ಕೆ ಕಳುಹಿಸುತ್ತಾ, ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿರಿಸಿದ್ದಾರೆ.





