ಚಿಕ್ಕೋಡಿ:ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚಿಕ್ಕೋಡಿ ಉಪವಿಭಾಗದ ನದಿಗಳು ಉಕ್ಕಿ ಹರಿಯುತ್ತಿದ್ದು, ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ.
ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಪರಿಣಾಮ ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ- ಭೋಜ, ಭೋಜವಾಡಿ-ಕುನ್ನೂರ, ಮಲಿಕವಾಡ- ದತ್ತವಾಡ, ಸೇತುವೆಗಳು ಜಲಾವೃತವಾಗಿವೆ. ಸೇತುವೆ ಎರಡು ಬದಿಗಳಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರವನ್ನು ನಿಷೇಧಿಸಲಾಗಿದೆ. ನದಿ ಪಾತ್ರದ ಜನರಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ.