ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ನಮ್ಮ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಎಂಎಫ್
ಅಧ್ಯಕ್ಷರಾದ ಭೀಮಾನಾಯಕ್ ಮತ್ತು ಕೆಎಂಎಫ್ ಎಂಡಿ ಜಗದೀಶ್ ಸೇರಿದಂತೆ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.





