ಸಮಾನ ಮನಸ್ಕರ ಸಂಘಟನೆಗಳ ಒಕ್ಕೂಟ, ಕಲಬುರಗಿ ವತಿಯಿಂದ ವಿವಿಧ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ನಗರದ ಎಸ್.ವಿ.ಪಿ ವೃತ್ತದಲ್ಲಿನ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಕಟ್ಟಿಮನಿ ಸಂಸ್ಥಾನ ಹಿರೇಮಠ ಪಾಳಾದ ಗುರುಮೂರ್ತಿ ಶಿವಾಚಾರ್ಯರು ವಹಿಸಿಕೊಂಡಿದ್ದರು, ಕಾರ್ಯಕ್ರಮದ ಉದ್ಘಾಟನೆಯನ್ನು ಯುನೈಟೆಡ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ವಿಕ್ರಮ ಸಿದ್ದಾರೆಡ್ಡಿ ಅವರು ಮಾಡಿದರು, ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜ ಅಪ್ಪಾ ಅವರಿಗೆ ಗೌರವ ಡಾಕ್ಟರೇಟ್ ಪದವಿ ಮತ್ತು ವರದಿಗಾರರಾದ ಆನಂದ ಸೌದಿ ಅವರಿಗೆ ರಾಮನಾಥ ಗೋಯಂಕಾ ಎಕ್ಸಲೆನ್ಸ್ ಇನ್ ಜರ್ನಲಿಸಂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಲ್ಲಿನಾಥ ಪಾಟೀಲ್ ಕಾಳಗಿ, ಆನಂದ ದಂಡೊತಿ, ಎಂ.ಎಸ್ ಪಾಟೀಲ್ ನರಿಬೋಳ, ಮಲ್ಲಿಕಾರ್ಜುನ ಸಾರವಾಡ, ದಯಾನಂದ ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸಮಾನ ಮನಸ್ಕರ ಸಂಘಟನೆಗಳ ಒಕ್ಕೂಟ, ಕಲಬುರಗಿ ವತಿಯಿಂದ ವಿವಿಧ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭ
RELATED ARTICLES
Recent Comments
Hello world!
ಮೇಲೆ