ಚಿತ್ತಾಪುರ ತಾಲೂಕಿನಾಧ್ಯಂತ ಕಳೆದ ಕೆಲವು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ದಂಡೋತಿ ಗ್ರಾಮದ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ಧಾರಾಕಾರ ಮಳೆಯಿಂದ ವಿವಿಧ ಜಲಾಶಯಗಳಿಂದ ನೀರು ಹರಿಬಿಟ್ಟ ಪರಿಣಾಮ, ತಾಲೂಕಿನ ಕಾಗಿಣ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬಂದು ದಂಡೋತಿ ಗ್ರಾಮದ ಸೇತುವೆ ಮುಳುಗಡೆಯಾಗಿದೆ.
ಚಿತ್ತಾಪುರ ಕಲಬುರಗಿ ಮಾರ್ಗದ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ವಾಹನ ಹಾಗೂ ಬೈಕ್ ಸವಾರರು ಪರದಾಡುವಂತಾಗಿದೆ.
ಧಾರಾಕಾರ ಮಳೆಗೆ ಉಕ್ಕಿ ಹರಿಯುತ್ತಿರುವ ದಂಡೋತಿ ಗ್ರಾಮದ ಕಾಗಿಣಾ ಸೇತುವೆ
RELATED ARTICLES
Recent Comments
Hello world!
ಮೇಲೆ