ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಯುನಿಸೆಫ್ ಸಂಸ್ಥೆಯ ಸಹಯೋಗದಲ್ಲಿ ನೀರಿನ ಸಂರಕ್ಷಣೆಗಾಗಿ ಯುವಜನತೆಯ ಕಾರ್ಯೋನ್ಮುಖತೆ ಕುರಿತು ಜನಜಾಗೃತಿ ಕಾರ್ಯಕ್ರಮ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಗಳ ಚಾಲನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕರದಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸೆಪ್ಟೆಂಬರ್ 14 ರಂದು ನಗರದಲ್ಲಿ ಎಮ್. ಎಸ್. ಕೆ.ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ವೀರೆದ್ರ ಹೆಗ್ಗಡೆಯವರು ವಹಿಸಿಕೊಳ್ಳಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಡಲಿದ್ದಾರೆ. ಇನ್ನೂ ಕಾರ್ಯಕ್ರಮದಲ್ಲಿ ನೂತನ ಮಹಾನಗರ ಪಾಲಿಕೆಯ ಮೇಯರ್ ಯಲ್ಲಪ್ಪ ನಾಯ್ಕೋಡಿ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಧರ್ಮಸ್ಥಳ ಟ್ರಸ್ಟ್ ಮುಖಂಡರಾದ ಸಿ.ಎನ್ ಬಬಳಗಾಂವ, ಮಾಲತಿ ರೇಷ್ಮಿ, ಅನೀಲಕುಮಾರ ಡಾಂಗೆ, ನರಸಮ್ಮ ಅವಂಟಿ, ಸೂರ್ಯಕಾಂತ, ಜಯಂತ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು