Google search engine
ಮನೆUncategorizedಕಲಬುರಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 2 ಮತ್ತು 3 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಜಿಲ್ಲೆಯ ಜನತೆಯಲ್ಲಿ...

ಕಲಬುರಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 2 ಮತ್ತು 3 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಜಿಲ್ಲೆಯ ಜನತೆಯಲ್ಲಿ ಅಗತ್ಯ ಕ್ರಮ ವಹಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಕಲಬುರಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 2 ಮತ್ತು 3 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ

ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುಂಜಾಗ್ರತೆ ವಹಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದೂ, ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಗ್ರಾಮದಲ್ಲಿ ಕೆರೆ, ಹಳ್ಳ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆಯಿದೆ. ಜಾನುವಾರುಗಳನ್ನು ನೀರು ಕುಡಿಸಲು ಕೆರೆ ಕಟ್ಟೆಗಳ ಬಳಿ ಹೋಗಬಾರದು. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕ ಆಸ್ತಿ-ಪಾಸ್ತಿ, ಪ್ರಾಣ ಹಾನಿ ತಡೆಯುವ ದೃಷ್ಟಿಯಿಂದ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಬೇಕು ಎಂದು ಕಲಬುರಗಿ ಜನತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!