ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಇವರುಗಳ ವತಿಯಿಂದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು
ಕಲಬುರಗಿ ನಗರದ ಹೊರವಲಯದಲ್ಲಿರುವ ಕೋಟನೂರ ಮಠದ ಸಿದ್ದಶ್ರೀ ಡಿವೈನ್ ಪ್ಯಾಲೇಸ್’ನಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿಗೆ ಆಯ್ಕೆಯಾದ ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ವಿವಿಧ ಗಣ್ಯರ ನೇತೃತ್ವದಲ್ಲಿ ಜ್ಯೋತಿ ಬೆಳಗಿಸಿ, ಡಾ. ಸರ್ವಪ್ಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಪುಲೆ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಪ್ರಾಥಮಿಕ ವಿಭಾಗದ ಹದಿನಾರು ಜನ ಮತ್ತು ಪ್ರೌಢ ವಿಭಾಗದ ಎಂಟು ಜನ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಬಿ ಆರ್ ಪಾಟೀಲ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವಾರಸಿಂಗ್ ಮೀನಾ ಸೇರಿದಂತೆ ನೂತನ ಮೇಯರ್ ಯಲ್ಲಪ್ಪ ನಾಯ್ಕೋಡಿ ಅವರು ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರ, ಮರೆಪ್ಪ ಎಂ ಬಸವಪಟ್ಟಣ, ರಾಜು ದೊಡ್ಮನಿ, ಮಹೇಶ ಹೂಗಾರ, ಮಲ್ಲಯ್ಯ ಗುತ್ತೇದಾರ ಸೇರಿದಂತೆ ವಿವಿಧ ಗಣ್ಯರು ಹಾಗೂ ವಿವಿಧ ಶಾಲಾ ಶಿಕ್ಷಕರು, ಶಿಕ್ಷಕಿಯರು, ಮುದ್ದುಮಕ್ಕಳು ಇದ್ದರು.