ಸಿದ್ದರಾಮಯ್ಯನವರ ಮೇಲೆ ಮಾಡಿರುವ ಮುಡಾ ಹಗರಣದ ಆರೋಪವು ರಾಜಕೀಯ ಪ್ರೇರಿತವಾಗಿದೆ ಎಂದು ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿಯವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕ ರಾಜ್ಯದ ಧೀಮಂತ ಮುಖ್ಯಮಂತ್ರಿ ಹಾಗೂ ಅಹಿಂದ ನಾಯಕ ಸಿದ್ದರಾಮಯ್ಯನವರ ಮೇಲೆ ಮಾಡಿರುವ ಮುಡಾ ಹಗರಣದ ಆರೋಪವು ರಾಜಕೀಯ ಪ್ರೇರಿತವಾಗಿದ್ದು, ಕುಮಾರಸ್ವಾಮಿಯ ಕುತಂತ್ರ ಎಂದು ಶಾಸಕರಾದ ಹಾಗೂ ಕೆಯುಡಿಎಪ್ಪಿ ಯ ಅಧ್ಯಕ್ಷರಾದ ಎಸ್‌ಎನ್. ನಾರಾಯಣಸ್ವಾಮಿ ಸ್ಪಷ್ಟಪಡಿಸಿದ್ದಾರೆ