ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಕಲಬುರಗಿಯಲ್ಲಿ ನಡೆಯುತ್ತಿರುವ 19 ನೇ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃಧ್ದಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆಂದು ಹೋರಾಟಗಾರ ಮುತ್ತಣ್ಣ ನಡಗೇರಿ ತಿಳಿಸಿದ್ದಾರೆ
ನಗರದ ಪತ್ರಿಕಾ ಭವನದಲ್ಲಿ ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ತೊಗರಿ ಪಾರ್ಕ್ ಸ್ಥಾಪಿಸಬೇಕು, ಕಲ್ಯಾಣ ಕರ್ನಾಟಕ ಭಾಗದ ಪ್ರವಾಸಿ ಐತಿಹಾಸಿಕ ಮತ್ತು ಧಾರ್ಮಿಕ ಕ್ಷೇತ್ರಗಳ ಅಭಿವೃಧ್ದಿಗೆ ವಿಶೇಷ ಒತ್ತು ನೀಡಬೇಕು, ಬೆಣ್ಣೆತೋರಾ ಜಲಾಶಯದಲ್ಲಿ ಕೆಆರ್ ಎಸ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಬೇಕು, ಕಲಬುರ್ಗಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಿ ಹೂಡಿಕೆದಾರರ ಸಮಾವೇಶ ಮಾಡಬೇಕು, ಗುಲಬರ್ಗಾ ವಿಶ್ವವಿದ್ಯಾಲಯವನ್ನು ರಾಷ್ಟ್ರಕೂಟ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಬೇಕು, ಕಲಬುರಗಿ ಮೆಗಾ ಟೆಕ್ಸ್’ಟೈಲ್ ಪಾರ್ಕನ್ನು ತ್ವರಿತವಾಗಿ ಆರಂಭಿಸಬೇಕು ಇನ್ನೂ ಹತ್ತು ಹಲವು ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಸಂಪುಟ ಸಭೆಯಲ್ಲಿ ಒತ್ತಾಯಿಸುತ್ತಿದ್ದೇವೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಾಬು ಮದನಕರ್,ಜೈಭೀಮ ಮಾಳಗೆ, ಮೋಹನ ಸಾಗರ, ಮಲ್ಲಿಕಾರ್ಜುನ ದೊರೆ ಸೇರಿದಂತೆ ಇನ್ನಿತರರು ಇದ್ದರು