ಹುಬ್ಬಳ್ಳಿಯಲ್ಲಿ ಫೈ ಓವರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಬಹಳಷ್ಟು ನೋವನ್ನುಂಟು ಮಾಡಿದೆ. ಈ ಕಾಮಗಾರಿ ವೇಳೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಾಕಷ್ಟು ಅನುದಾನವನ್ನು ಕೊಟ್ಟಿದ್ದೇವೆ. ಕಾಮಗಾರಿ ಬಗ್ಗೆ ನಿಗಾ ವಹಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದಿದ್ದಾರೆ.