ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹಾಗೂ ಸರ್ವಸ್ವ ತ್ಯಾಗವನ್ನು ಮಾಡಿದಂತಹ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿಗಳ ಸಮರ್ಪಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು
ಕಲಬುರಗಿ ನಗರದ ಅರಣ್ಯ ಭವನದಲ್ಲಿ ಆಚರಿಸಿದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಸುನೀಲ್ ಪೆನ್ವಾರ್ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಕಲಬುರಗಿ ಇವರ ಅಧ್ಯಕ್ಷತೆಯಲ್ಲಿ ವಿವಿಧ ಪೋಲೀಸ್ ತುಕಡಿಗಳ ಪರೇಡ್ ಮೂಲಕ ಅರಣ್ಯ ಸಂರಕ್ಷಣೆಯ ಸಂದರ್ಭದಲ್ಲಿ ಮಡಿದ ಅರಣ್ಯಾಧಿಕಾರಿಗಳಿಗೆ ಗೌರವ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಆಗಮಿಸಿದ್ದರೆ, ಗೌರವಾನ್ವಿತ ಅತಿಥಿಗಳಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವಾರ್ ಸಿಂಗ್ ಮೀನಾ ಅವರು ಆಗಮಿಸಿದ್ದರು, ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು