ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಎಲ್ಲೆಡೆ ಕೇಳಿಬರುತ್ತಿದ್ದೂ, ಚಿಕ್ಕೋಡಿ, ಗೋಕಾಕ್, ಅಥಣಿ ಪ್ರತ್ತೇಕ ಜಿಲ್ಲೆಗೆ ಬೇಡಿಕೆ ಹೆಚ್ಚಾಗಿದೆ.
ಅಥಣಿ ಪ್ರತ್ತೇಕ ಜಿಲ್ಲೆಗೆ ಅಥಣಿ ಜನರು ದಶಕಗಳಿಂದ ಹೋರಾಟ ಮಾಡುತ್ತಲೆ ಬಂದಿದ್ದಾರೆ. ಅಥಣಿ ಪ್ರತ್ತೇಕ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನಕಾರಾತ್ಮಕ ಹೇಳಿಕೆ ನೀಡಿದ್ದು ಅಥಣಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಅಥಣಿ ಪಟ್ಟಣದ ಪ್ರವಾಶಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತ. ಅಥಣಿ ಜಿಲ್ಲೆ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.