Home Uncategorized ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ

ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ

0
ಅತಿವೃಷ್ಠಿಯಿಂದ ಹಾನಿಯಾದ ಪ್ರದೇಶಗಳಿಗೆ ಮುನೀಶ್ ಮೌದ್ಗಿಲ್ ಭೇಟಿ ಪರಿಶೀಲನೆ

ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ರವಿವಾರ ಬೀದರ ಜಿಲ್ಲೆಯ ಕಮಠಾಣ, ಬಗದಲ್, ಗೋಧಿ ಹಿಪ್ಪರಗಾ, ಮುಡಬಿ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇಂದು ನಡೆಯುವ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಅತಿವೃಷ್ಟಿಯಿಂದ ಆದಂತಹ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ರಮ್ಯಾ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ , ಸಹಾಯಕ ಆಯುಕ್ತರು, ತಹಸಿಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

error: Content is protected !!