Google search engine
ಮನೆUncategorizedಮೈಸೂರು ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ ನಮ್ಮ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ...

ಮೈಸೂರು ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ ನಮ್ಮ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬ

ಮೈಸೂರು ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ ನಮ್ಮ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬ

ಮೈಸೂರು ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ ನಮ್ಮ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬವಾಗಿದೆ- ಕೆ. ವೆಂಕಟೇಶ್ ಮೈಸೂರು,ಸೆ.10(ಕರ್ನಾಟಕವಾರ್ತೆ):- ಮೈಸೂರು ದಸರಾ ಅತ್ಯಂತ ಜನಪ್ರಿಯವಾದದ್ದು, ನಾವೆಲ್ಲರೂ ಚಿಕ್ಕವರಿಂದಲೂ ಮೈಸೂರು ದಸರಾವನ್ನು ನೋಡಿಕೊಂಡು ಬೆಳೆದರೂ ಹಾಗೆ ಈ ನಮ್ಮ ನಾಡ ಹಬ್ಬ ಕೇವಲ ಜಿಲ್ಲೆಗಳಿಗೆ ರಾಜ್ಯಕ್ಕೆ ಸೀಮಿತವಲ್ಲ ಈ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬವಾಗಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು. ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ, ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಈ ನಾಡ ಹಬ್ಬದಲ್ಲಿ ಲಕ್ಷಾಂತರ ಜನ ಬಂದು ವೀಕ್ಷಣೆ ಮಾಡಿ ಸಂತೋಷಪಟ್ಟು ಕಣ್ ತುಂಬಿಕೊಳ್ಳುತ್ತಾರೆ. ಹಾಗೆ ಯುವ ಸಂಭ್ರಮವು ಕೂಡ ಒಂದಾಗಿದೆ. ಯುವ ಪೀಳಿಗೆಗಳಿಗೆ ಅತ್ಯಂತ ಪ್ರಿಯವಾದ ಹಬ್ಬವಾಗಿದೆ ನಾಡಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ವಿವಿಧ ಜಿಲ್ಲೆಗಳಿಂದ ಕಾಲೇಜು ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಯಶಸ್ವಿಯಾಗಿ ನಡೆಯಲಿ ಶುಭ ಹಾರೈಸಿದರು. ಈ ವರ್ಷ ಯುವ ಸಂಭ್ರಮ ಅತ್ಯಂತ ವಿಶೇಷವಾಗಿ ನಡೆಯುತ್ತಿದ್ದು, ಇದರಲ್ಲಿ ಭಾಗವಹಿಸುವಂತಹ ಯುವಕ ಯುವತಿಯರಿಗೆ ಹಾಗೂ ಯುವ ಪ್ರೇಕ್ಷಕರಿಗೆ ಹೆಚ್ಚಾಗಿ ಮನೋರಂಜನೆಯಿಂದ ಸಂಭ್ರಮಿಸುವಂತದು ಎಂದು ಹೇಳಿದರು. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಅವರು ಮಾತನಾಡಿ ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು. ದಸರಾ ಮಹೋತ್ಸವದ ಮೊದಲನೇ ಕಾರ್ಯಕ್ರಮವಾದ ಯುವಸಂಭ್ರಮ ಯುವಕರಿಗೆ ರಾಸಾದೌತಣವಾಗಿದೆ. ಈ ಕಾರ್ಯಕ್ರಮವನ್ನು ವಿಜೃಂಭಣೆಯಾಗಿ ಮಾಡಲು ಸರ್ಕಾರ ಕಾರಣವಾಗಿದ್ದು, ಅತಿ ಹೆಚ್ಚು ಅನುದಾನವನ್ನು ನೀಡಿ ದಸರಾ ಆಚರಣೆಯ ಯುವಸಂಭ್ರಮದಲ್ಲಿ ಅವಿಸ್ಮರಣೀಯವಾಗಿರುವ ಕಾರ್ಯಕ್ರಮಗಳನ್ನು ನೀಡಿದೆ ಎಂದು ತಿಳಿಸಿದರು. ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೆಟ್ ಅವರು ಮಾತನಾಡಿ ಯುವಸಂಭ್ರಮದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಲಿದ್ದು, ಅಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ನೋಡಬೇಕು. ಕಾರ್ಯಕ್ರಮ ನೀಡಲು ಬಂದಿರುವಂತಹ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಅವರಲ್ಲಿ ಇನ್ನು ಹೆಚ್ಚಿನ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದು ಹೇಳಿದರು. ಎಲ್ಲಾ ಯುವ ಪೀಳಿಗೆಗಳು ಅರಿತುಕೊಂಡು ಎಲ್ಲರಿಗೂ ಸಮಾನತೆಯನ್ನು ತಂದುಕೊಟ್ಟಿರುವ ಸಂವಿಧಾನದ ಆಶಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ ಮತ್ತು ಬ್ರಾತೃತ್ವವನ್ನು ಬೆಳೆಸಬೇಕು ಎಂದು ಹೇಳಿದರು. ಎಕ್ಕ ಸಿನಿಮಾ ಖ್ಯಾತಿಯ ಯುವ ರಾಜ್ ಕುಮಾರ್ ಮಾತನಾಡಿ ತುಂಬಾ ಖುಷಿ ಆಗುತ್ತಿದೆ. ದಸರಾ ಅಂದರೆ ಎನರ್ಜಿ. ಅರಮನೆ, ರಾಜರು, ಕುವೆಂಪು ನೆನಪಾಗುತ್ತಾರೆ ಎಂದರು. ಬ್ಯಾಂಗಲ್ ಬಂಗಾರಿ ಗೀತೆ ನೃತ್ಯ ಮಾಡಿ ಜೋಶ್ ತುಂಬಿದರು ಅಮೃತ ಅಯ್ಯಂಗಾರ್ ಅವರು ಮಾತನಾಡಿ, ನಮ್ಮೂರಲ್ಲಿ ನಮ್ಮ ವೇದಿಕೆಯಲ್ಲಿ ನಿಂತು ಮಾತನಾಡಲು ಖುಷಿ ಆಗುತ್ತೆ. ಇದೇ ವೇದಿಕೆಯಲ್ಲಿ ನಾನು ನೃತ್ಯ ಮಾಡಿದ್ದೇನೆ. ಮೈಸೂರಿಗೆ ಬರಲು ಖುಷಿ ಆಗುತ್ತೆ. ದಸರಾಗೆ ಕಿಕ್ ಸ್ಟಾರ್ಟ್ ಕೊಡೊದು ಯುವ ಸಂಭ್ರಮ, ನಮ್ಮ ನಾಡಹಬ್ಬವನ್ನು ತಲಾ ತಲಾಂತರದಿಂದ ಬೆಳೆಸಿಕೊಂಡು ಬಂದು, ಇಂದಿಗೂ ಅದೇ ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತಸದ ಸಂಗತಿ. ನಾವು ಇದರಲ್ಲಿ ಪಾಲ್ಗೊಂಡಿರುವುದು ಹೆಚ್ಚಿನ ಖುಷಿ ನೀಡಿದೆ. ಕರ್ನಾಟಕದ ಹೆಮ್ಮೆಯಾಗಿರುವ ದಸರಾವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಿ ಯಶಸ್ವಿಗೊಳಿಸೋಣ ಎಂದರು. ಬಳಿಕ ಮೊದಲ ದಿನ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ನೃತ್ಯಗಳು ನಡೆದವು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಡಾ ಪುಷ್ಪಾ ಅಮರ್ ನಾಥ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್ ಇನ್ನಿತರರು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!