ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8. 17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿರುತ್ತದೆ. ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ. ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದೇನೆ. ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಪ್ರಿಯಾಂಕ್ ಖರ್ಗೆಎಂದರು
ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ
ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ





