Home Uncategorized ಕೃಷ್ಣಾ ಭೀಮಾ ನದಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ತುರ್ತಾಗಿ ಪರಿಹಾರ ಕೈಗೊಳ್ಳುವಂತೆ ಸಿಎಂ ಸೂಚನೆ

ಕೃಷ್ಣಾ ಭೀಮಾ ನದಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ತುರ್ತಾಗಿ ಪರಿಹಾರ ಕೈಗೊಳ್ಳುವಂತೆ ಸಿಎಂ ಸೂಚನೆ

0
ಕೃಷ್ಣಾ  ಭೀಮಾ ನದಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ತುರ್ತಾಗಿ ಪರಿಹಾರ  ಕೈಗೊಳ್ಳುವಂತೆ  ಸಿಎಂ ಸೂಚನೆ

ಕೃಷ್ಣಾ ಮತ್ತು ಭೀಮಾ ನದಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತುರ್ತಾಗಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜತೆಗೆ ಮುಖ್ಯಮಂತ್ರಿಯವರು ಮಂಗಳವಾರ (ಸೆ.30) ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಈ ಸೂಚನೆ ನೀಡಿರುವ ಅವರು, ಖುದ್ದಾಗಿ ಸ್ಥಳದಲ್ಲಿ ಹಾಜರಿರುವಂತೆ ಕಟ್ಟಪ್ಪಣೆ ಮಾಡಿದ್ದಾರೆ. ಈ ಕುರಿತು ಸಿಎಂ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ’ಡಿಸಿಗಳು ಮತ್ತು ಸಿಇಒಗಳು ಪ್ರವಾಹ ಪೀಡಿತ ಪ್ರದೇಶಕ್ಕೆ ತಕ್ಷಣ ತೆರಳಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಭೇಟಿ ನೀಡಿ ಅಗತ್ಯ ಕ್ರಮ ಸಂಬಂಧ ಜಿಲ್ಲಾಡಳಿತಗಳಿಗೆ ಸೂಚನೆ ನೀಡಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ಜಾನುವಾರುಗಳ ಪ್ರಾಣಹಾನಿ ಆಗದಂತೆ ಎಚ್ಚರ ವಹಿಸಬೇಕು. ಸಂತ್ರಸ್ತರಿಗೆ ಕಾಳಜಿ ಕೇಂದ್ರ ತೆರೆಯಬೇಕು. ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು,” ಎಂದು ಸಿಎಂ ಸೂಚಿಸಿದ್ದಾರೆ ಪರಿಹಾರ ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಿರ್ದೇಶನ ನೀಡಿದ್ದಾರೆ. ”ಕಲಬುರಗಿ ಜಿಲ್ಲೆಯಲ್ಲಿ ಸುರಿದ ತೀವ್ರ ಮಳೆ ಹಾಗೂ ಮಹಾರಾಷ್ಟ್ರದ ಉಜನಿ, ನೀರ ಜಲಾಶಯಗಳಿಂದ ಹೆಚ್ಚಿನ ನೀರು ಬಿಟ್ಟಿರುವುದರಿಂದ ಭೀಮಾ ನದಿ ತೀರ, ಬೆಣ್ಣೆತೋರಾದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ತೀವ್ರ ನಿಗಾ ವಹಿಸಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ,” ಎಂದು ಸಿಎಂ ತಿಳಿಸಿದ್ದಾರೆಸಿಎಂ ಸಿದ್ದರಾಮಯ್ಯ ಅವರನ್ನು ಭಾನುವಾರ ಸಂಜೆ ಭೇಟಿಯಾದ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್ ಪ್ರವಾಹದಿಂದಾದ ಹಾನಿ, ಪರಿಹಾರ ಕಾರ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆಯೂ ಆಗ್ರಹಿಸಿದ್ದಾರೆಕೇಂದ್ರ ಸರಕಾರವೂ ಅಗತ್ಯವಿರುವ ಎಲ್ಲ ನೆರವು ನೀಡಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರಕಾರ ಕರ್ನಾಟಕದೊಂದಿಗೆ ದೃಢವಾಗಿ ನಿಲ್ಲಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಅವಲೋಕನಕ್ಕೆ ರಾಜ್ಯ ಬಿಜೆಪಿಯಿಂದ 2 ತಂಡ ಪ್ರಕಟಿಸಲಾಗಿದ್ದು, ಸೋಮವಾರದಿಂದಲೇ ಈ ತಂಡಗಳು ಪ್ರವಾಸ ಕೈಗೊಳ್ಳಲಿವೆ. ಕಲಬುರಗಿ ಜಿಲ್ಲೆಗೆ ಮಂಗಳವಾರ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ, ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿ ಅವಲೋಕನ ಮಾಡಲಿದ್ದಾರೆ. ಬಳಿಕ ಪರಿಹಾರ ಕಾರ್ಯ ಪರಿಶೀಲನೆ ಸಂಬಂಧ ಸಭೆ ನಡೆಸಲಿದ್ದಾರೆ. ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಜರಾಗಲು ಸೂಚನೆ ನೀಡಲಾಗಿದೆ

LEAVE A REPLY

Please enter your comment!
Please enter your name here

error: Content is protected !!