ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕನ ಕಾರಿನ ಗಾಜು ಒಡೆದ ಪೊಲೀಸರು
ಮಂಗಳೂರಿನ ನಂತೂರು ಸರ್ಕಲ್ ಬಳಿ ಅಕ್ಟೋಬರ್ 6 ರಂದು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದಾನೆ ಎಂಬ ಅನುಮಾನದ ಮೇಲೆ ಟ್ರಾಫಿಕ್ ಪೊಲೀಸರು ಕಾರು ನಿಲ್ಲಿಸಲು ಸೂಚಿಸಿದರೂ, ಚಾಲಕ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಕೋಪಗೊಂಡ ಪೊಲೀಸರು ಕಾರಿನ ಹಿಂದಿನ ಗಾಜನ್ನು ಒಡೆದು ಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಚಾಲಕನ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದ್ದು, ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ





