ರೋಹಿತ್ ಶರ್ಮಾಗೆ ಏಕದಿನ ತಂಡದಲ್ಲಿ ಉಳಿಯಲು 6 ಪಂದ್ಯಗಳೇ ನಿರ್ಣಾಯಕ!
ಭಾರತ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಬದಲಿಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಶುಭ್ ಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ತಂಡವನ್ನು ರೂಪಿಸಬೇಕಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ 6 ಏಕದಿನ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡದಿದ್ದರೆ ಅವರ ಏಕದಿನ ತಂಡದ ಭವಿಷ್ಯ ಡೌಟ್ ಎನ್ನಲಾಗಿದೆ





