ಬೆಂಗಳೂರು: ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ: ಬಿವೈವಿ ಬೆಂಗಳೂರು: ಪ್ರತ್ಯೇಕ ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಇದರ ಹಿನ್ನೆಲೆಯಲ್ಲಿ ಯಾರೆಂಬ ಅರಿವು ಸಮಾಜಕ್ಕಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ತಿಳಿಸಿದರು. ಇಂದು ನಗರದಲ್ಲಿ ಮಾತನಾಡಿದ ಅವರು, ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ ಎಂದರು