ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ ಜೇವರ್ಗಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ ನೀಡಿತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು, ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶಂಪೂರ್, ಶಾಸಕರಾದ ಕರೆಮ್ಮ, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್, ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ, ಮಹೇಶ್ವರಿ ವಾಲಿ, ಶಿವಕುಮಾರ ನಾಟಿಕರ ಸೇರಿದಂತೆ ಹಲವು ಜೆಡಿಎಸ್ ನಾಯಕರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಭೀಮಾ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆದುಕೊಂಡರು