ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕೇಂದ್ರ ಬಿಜೆಪಿ ಸರಕಾರದ ಮತ ಕಳ್ಳತನ ವಿರೋಧಿಸಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.ಯಾದಗಿರಿಯ ಗಾಂಧಿ ವೃತ್ತದಲ್ಲಿ ಹಮ್ಮಿಕೊಂಡ ಸಹಿ ಸಂಗ್ರಹ ಅಭಿಯಾನದಲ್ಲಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ, ಶಾಸಕ ಚನ್ನಾರೆಡ್ಡಿ ಪಾಟೀಲ್ ಅವರು ಭಾಗಿಯಾದರು.ಕೇಂದ್ರ ಸರಕಾರವು ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದು,ಮತಗಳ್ಳತನ ಮಾಡುವ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿಯಾನದಲ್ಲಿ ಭಾಗಿಯಾದರು