ಬೆಂ. ಗ್ರಾ: ಸಿಎಂ ಬದಲಾವಣೆಗೆ ಶಾಸಕರ ಬಲ ಕೂಡ ಮುಖ್ಯ ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಹೇಳಿಕೆಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಆಯ್ಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಬಲವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ನಗರದಲ್ಲಿ ತಿಳಿಸಿದ್ದಾರೆ. ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಶಾಸಕರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ