ಕಲಬುರಗಿ: ಕಾರ್ಮಿಕ ಸಚಿವರ ಪ್ರವಾಸ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಅಕ್ಟೋಬರ್ 14 ರಂದು ಬೆಳಿಗ್ಗೆ 9.30ಕ್ಕೆ ಬೀದರದಿಂದ ರಸ್ತೆ ಮಾರ್ಗವಾಗಿ ಕಲಬುರಗಿ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 9.30ಕ್ಕೆ ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಡಿ.ಸಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಎಸ್.ಪಿ ಅವರೊಂದಿಗೆ ಚರ್ಚೆ ನಡೆಸುವರು. ನಂತರ ಬೆಳಿಗ್ಗೆ 10.30ಕ್ಕೆ ಕಪನೂರ ಕೈಗಾರಿಕೆ ಪ್ರದೇಶದಲ್ಲಿ ಮತ್ತು 11 ಗಂಟೆಗೆ ನಂದೂರು ಕೈಗಾರಿಕೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಉದ್ಘಾಟಿಸಲಿದ್ದಾರೆ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ