Google search engine
ಮನೆUncategorizedಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ಮೈಸೂರು, ಅ.17(ಕರ್ನಾಟಕವಾರ್ತೆ):- ಈಗಿನ ಸನ್ನಿವೇಶದಲ್ಲಿ ನಿರುದ್ಯೋಗ ಹೋಗಲಾಡಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಮಹಾರಾಜ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉದ್ಯೋಗ ಮೇಳ ಯುವ ಸಮೃದ್ಧಿ ಸಮ್ಮೇಳನವನ್ನು ಅವರು ಉದ್ಘಾಟಿಸಿ ಮಾತನಾಡಿದರು. ನಿರುದ್ಯೋಗ ಸಮಸ್ಯೆಯಿಂದ ನಿರುದ್ಯೋಗಿಗಳು ಕಷ್ಟಪಡುತ್ತಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಉದ್ಯೋಗಮೇಳ ಆಯೋಜಿಸಿ ಸ್ಥಳದಲ್ಲೇ ಉದ್ಯೋಗ ಕೊಡಿಸುವ ಕಾರಣಕ್ಕೆ ನಮ್ಮ ಸರ್ಕಾರ ಈ ಕಾರ್ಯಕ್ರಮ ಮಾಡುತ್ತಿದೆ. ಅದರಂತೆ ಇಂದು ಮೈಸೂರಿನಲ್ಲಿ‌ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 40 ಸಾವಿರ ನಿರುದ್ಯೋಗಿಗಳು ನೊಂದಣಿ ಮಾಡಿಕೊಂಡಿದ್ದು, ಎಲ್ಲರಿಗೂ ಉದ್ಯೋಗ ದೊರಕಿಸಿ ಕೊಡುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದರು. ಕಳೆದ 2 ವರ್ಷಗಳಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ 58,892 ಅಭ್ಯರ್ಥಿಗಳು ಭಾಗವಹಿಸಿದ್ದಾರೆ. 11,507 ಅಭ್ಯರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ನಡೆದ ವಿವಿಧ ಉದ್ಯೋಗಮೇಳ ಗಳಲ್ಲಿ 1 ಲಕ್ಷಕ್ಕೂ ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿದ್ದು, 24,391 ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ನೇಮಕ ವಾಗಿದ್ದಾರೆ, ಇದು ನಮ್ಮ ಸರ್ಕಾರದ ಸಾಧನೆ ಎಂದು ಹೇಳಿದರು. ನಮ್ಮ ಸರ್ಕಾರ ಬಂದ ನಂತರ 28 ಸಾವಿರ ಸರ್ಕಾರಿ ಉದ್ಯೋಗಗಳು ಭರ್ತಿ ಮಾಡಲಾಗಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದ್ದು, ರಾಜ್ಯ ಸರಕಾರದಲ್ಲಿ 7 ಲಕ್ಷ ಸರ್ಕಾರಿ ಹುದ್ದೆಗಳು ಮಾತ್ರ ಇರುವುದು ಉಳಿದವರಿಗೆಲ್ಲ ಕಂಪನಿಗಳು ಹಲವು ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು ಉದ್ಯೋಗಮೇಳ ಅವಶ್ಯಕವಾಗಿದೆ ಇದನ್ನು ಎಲ್ಲರೂ ಉಪಯೋಗಿಸಿಕೊಳ್ಳಿ ಎಂದು ಹೇಳಿದರು. ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆ ನಿರುದ್ಯೋಗಿಗಳಿಗೆ ಮಾಡಿದ್ದೇವೆ. ಅದು ಯಾವುದೇ ಕಾರಣಕ್ಕೂ ಸಹ ನಿಲ್ಲುವುದಿಲ್ಲ. ಅಭ್ಯರ್ಥಿಗಳಿಗೆ ಪ್ರತಿಯೊಬ್ಬರಿಗೂ 2 ವರ್ಷ ಯುವನಿಧಿ ನೀಡಲಾಗುವುದು,ಯುವನಿಧಿ ಫಲಾನುಭವಿಗಳು ಕೆಲಸ ಪಡೆದುಕೊಂಡಲ್ಲಿ ಹಣ ನಿಲ್ಲಿಸಲಾಗುತ್ತದೆ ಹೊರತು ಕೌಶಲ್ಯ ಅಭಿವೃದ್ಧಿ ತರಬೇತಿಗೆ ಹೋಗುವವರಿಗೂ ಯುವನಿಧಿ ನಿಲ್ಲಿಸುವುದಿಲ್ಲ ಸುಳ್ಳು ಪ್ರಚಾರಗಳಿಗೆ ಕಿವಿಗೊಡದೆ ತರಬೇತಿ ಪಡೆಯಿರಿ ಎಂದು ಹೇಳಿದರು. ಉದ್ಯೋಗಮೇಳದಲ್ಲಿ ಸ್ಥಳದಲ್ಲೇ ನೇಮಕಗೊಂಡ ಹಲವು ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಾತಿ ಪತ್ರ ವಿತರಿಸಿ ಶುಭಕೋರಿದರು ಹಾಗೂ ಸಂಕಲ್ಪ ಟೂಲ್ ಕಿಟ್ ನಲ್ಲಿ ತರಬೇತಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ ಮಾಡಿದರು. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಮಾತನಾಡಿ ಯುವಕರಿಗೆ ಒಂದು ಉತ್ತಮವಾದಂತಹ ಭವಿಷ್ಯವನ್ನು ಕಟ್ಟಿಕೊಡಬೇಕು ಹಾಗೂ ಅವರಿಗೆ ಉದ್ಯೋಗಾವಕಾಶವನ್ನು ನೀಡಬೇಕು ಎಂಬ ಉದ್ದೇಶದಿಂದ ನಮ್ಮ ರಾಜ್ಯ ಸರ್ಕಾರ ಯುವನಿಧಿ, ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ನಡೆಸುತ್ತಾ ಬರಲಾಗುತ್ತಿದೆ ಎಂದು ಹೇಳಿದರು. ನಿರುದ್ಯೋಗ ಎಂಬುದು ನಮ್ಮ ದೇಶದ ಒಂದು ದೊಡ್ಡ ಸಮಸ್ಯೆಯಾಗಿದ್ದು, ನಿರುದ್ಯೋಗ ಸಮಸ್ಯೆಯನ್ನು ತೊಡೆದು ಹಾಕುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬ ಉದ್ಯೋಗಕಾಂಕ್ಷಿಗಳು ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹಲವಾರು ಕಂಪನಿಗಳಲ್ಲಿ ‌ಖಾಲಿ ಇರುವ ಹುದ್ದೆಗಳನ್ನು ಸಂಘಟಿಸಿ ಉದ್ಯೋಗ ಮೇಳ ನಡೆಸಲಾಗುತ್ತಿದೆ ಎಂದರು. ವೇದಿಕೆಯಲ್ಲಿದ್ದ ಗಣ್ಯರನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್,ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ವಿಧಾನ ಪರಿಷತ್ ನ ಶಾಸಕರಾದ ಡಾ.ಡಿ. ತಿಮ್ಮಯ್ಯ, ರವಿಶಂಕರ್. ಡಿ, ಕೆ.ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್ ಅವರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!